ಪುಣೆ: ಕೊರೊನಾ ಸೋಂಕಿಗೆ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಿದ್ಧ ಪಡಿಸುತ್ತಿರುವ ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಸಂಸ್ಥೆ ಮತ್ತೆ ಸ್ಪಷ್ಟನೆ ನೀಡಿದ್ದು, ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದೆ.
ಕೋವಿಶೀಲ್ಡ್ ಲಸಿಕೆಯಿಂದ ಯಾವುದೇ ಸೈಡ್ ಇಫೆಕ್ಟ್ ಇಲ್ಲ. ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಹೊರತು ಆರೋಗ್ಯ ಸಮಸ್ಯೆಗೆ ಕಾರಣವಾಗಲ್ಲ ಎಂದು ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿದೆ.
ಕೋವಿಶೀಲ್ಡ್ ಲಸಿಕೆ ಪ್ರಯೋಗಕ್ಕೆ ಒಳಗಾಗಿದ್ದ ಚೆನ್ನೈ ಮೂಲದ ವ್ಯಕ್ತಿಯೊಬ್ಬರು ತಮಗೆ ಲಸಿಕೆ ಸೈಡ್ ಇಫೆಕ್ಟ್ ನಿಂದ ನರ ದೌರ್ಬಲ್ಯವುಂಟಾಗಿದ್ದು, 5 ಕೋಟಿ ಪರಿಹಾರ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಲಸಿಕೆ ತಯಾರಿಸುತ್ತಿರುವ ಸಂಸ್ಥೆ ಸೀರಮ್, ವ್ಯಕ್ತಿಯ ಆರೋಪ ಸುಳ್ಳು, ಲಸಿಕೆ ಸುರಕ್ಷಿತವಾಗಿದೆ ಎಂದು ಸ್ಪಷ್ಟಪಡಿಸಿದೆ.