alex Certify ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಅಪಾಯದ ಹಂತಕ್ಕೆ ತಲುಪಲಿದೆ ಉಷ್ಣಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದ ನಡುವೆ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಅಪಾಯದ ಹಂತಕ್ಕೆ ತಲುಪಲಿದೆ ಉಷ್ಣಾಂಶ

ಕೊರೊನಾ ಲಾಕ್ಡೌನ್ ನಿಂದಾಗಿ ರಾಜ್ಯದ ಜನತೆ ನಲುಗಿ ಹೋಗಿದ್ದಾರೆ. ಸರ್ಕಾರ ಈಗ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ಸಹ ಈ ಹಿಂದಿನಂತೆ ವ್ಯಾಪಾರ ವಹಿವಾಟಿಲ್ಲದೆ ಕಂಗೆಟ್ಟಿದ್ದಾರೆ. ಇದರ ಜೊತೆಗೆ ಏರಿಕೆಯಾಗುತ್ತಿರುವ ಬಿಸಿಲಿನ ತಾಪವೂ ಸಾರ್ವಜನಿಕರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಇದರ ಮಧ್ಯೆ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಉತ್ತರ ಭಾರತದ ಹಲವು ಕಡೆ ಉಷ್ಣಾಂಶ 47 ಡಿಗ್ರಿ ಸೆಲ್ಸಿಯಸ್ ತಲುಪಬಹುದೆಂದು ಹೇಳಿದೆ.

ಕರ್ನಾಟಕದ ಒಳನಾಡು, ಆಂಧ್ರ ಪ್ರದೇಶದ ರಾಯಲಸೀಮಾ, ಛತ್ತಿಸ್ಗಢ, ಒಡಿಶಾ, ಗುಜರಾತಿನ ಹಲವು ಭಾಗಗಳಲ್ಲೂ ಸಹ ಉಷ್ಣತೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎನ್ನಲಾಗಿದ್ದು, ಮೇ 28ರ ಬಳಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ತಿಳಿಸಲಾಗಿದೆ.

ಈಗಾಗಲೇ ಬೆಳಗ್ಗೆ 8 ಗಂಟೆಯಿಂದಲೇ ಉರಿಬಿಸಿಲು ಶುರುವಾಗುತ್ತಿದ್ದು, 11ಗಂಟೆ ಬಳಿಕ ಮನೆಯಿಂದ ಹೊರಬರುವುದೇ ಸಾರ್ವಜನಿಕರಿಗೆ ಕಷ್ಟವಾಗಿ ಪರಿಣಮಿಸಿದೆ. ಇದರ ಮಧ್ಯೆ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಬಹುದೆಂಬ ಹವಾಮಾನ ಇಲಾಖೆಯ ಮುನ್ಸೂಚನೆ ಆತಂಕ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...