alex Certify ಕೊರೊನಾ ಸಂಕಷ್ಟದ ನಡುವೆ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸಂಕಷ್ಟದ ನಡುವೆ ಸರ್ಕಾರಕ್ಕೆ ಎದುರಾಯ್ತು ಮತ್ತೊಂದು ಸವಾಲು

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಆರ್ಥಿಕವಾಗಿ ಕಂಗೆಟ್ಟಿರುವವರ ನೆರವಿಗಾಗಿ ಪ್ಯಾಕೇಜ್ ಘೋಷಿಸಿದೆ.

ರಾಜ್ಯ ಸರ್ಕಾರಗಳೂ ಸಹ ರೈತರು, ಕೂಲಿ ಕಾರ್ಮಿಕರು ಮೊದಲಾದ ವರ್ಗಗಳಿಗೆ ನೆರವಾಗುವ ಸಲುವಾಗಿ ಯೋಜನೆಗಳನ್ನು ಪ್ರಕಟಿಸಿವೆ. ಜೊತೆಗೆ ಕೆಲ ರಾಜ್ಯ ಸರ್ಕಾರಗಳು ಕಾರ್ಮಿಕ ಹಿತರಕ್ಷಣೆಯ ಕಾನೂನುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿವೆ.

ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕಾರ್ಮಿಕರ ಸ್ಥಿತಿ ಈಗಾಗಲೇ ಹದಗೆಟ್ಟಿದ್ದು, ಇದರ ಜೊತೆಗೆ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಗಳು ಆರೋಪಿಸಿವೆ.

ಹೀಗಾಗಿ ಮೇ 22ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಈಗಾಗಲೇ ಕೊರೊನಾ ಸಂಕಷ್ಟದಲ್ಲಿರುವ ಸರ್ಕಾರಗಳಿಗೆ ಕಾರ್ಮಿಕರ ಸಮಸ್ಯೆ ಪರಿಹರಿಸುವ ಮತ್ತೊಂದು ಸವಾಲು ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...