ಮಹಾಮಾರಿ ಕೊರೊನಾದಿಂದಾಗಿ ಜನತೆ ಈಗಾಗಲೇ ಹೈರಾಣಾಗಿ ಹೋಗಿದ್ದಾರೆ. ಕೊರೊನಾ ಕಾರಣಕ್ಕೆ ಇತರೆ ಆರೋಗ್ಯ ಸಮಸ್ಯೆಗಳಿಗೂ ಚಿಕಿತ್ಸೆ ಸಿಗುವುದು ಕಷ್ಟಕರವಾಗಿ ಪರಿಣಮಿಸಿರುವುದರ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ.
ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ವೈದ್ಯರು ಸೆಪ್ಟೆಂಬರ್ 15ರಿಂದ ಅಸಹಕಾರ ಚಳುವಳಿ ಆರಂಭಿಸಿದ್ದು, ಸೆಪ್ಟೆಂಬರ್ 21ರಿಂದ ಹೊರರೋಗಿ ವಿಭಾಗದ ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.
ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಅನುಕೂಲವಾಗಲಿದ್ದು, ಸರ್ಕಾರ ಶೀಘ್ರದಲ್ಲೇ ಸಮಸ್ಯೆಯನ್ನು ಪರಿಹರಿಸಲು ಮುಂದಾಗಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.