ದೇಶದಲ್ಲಿ ತಾಂಡವವಾಡುತ್ತಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಸಂಕಷ್ಟಕ್ಕೀಡು ಮಾಡಿದೆ. ಇದರ ಮಧ್ಯೆಯೂ ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ದೊಡ್ಡ ಮಟ್ಟದಲ್ಲಿ ಲಾಭ ಮಾಡುತ್ತಿದೆ.
ಹೀಗಾಗಿ ಮುಖೇಶ್ ಅಂಬಾನಿ ಈಗ ವಿಶ್ವದ 5ನೇ ಅತಿ ಶ್ರೀಮಂತರಾಗಿ ಹೊರಹೊಮ್ಮಿದ್ದು, ಅವರ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ವಿಶ್ವದ ಟಾಪ್-50 ಕಂಪನಿಗಳ ಪೈಕಿ 48ನೇ ಸ್ಥಾನದಲ್ಲಿದೆ.
ಇದರ ಮಧ್ಯೆ ಮತ್ತೊಂದು ಮಹತ್ವದ ಸಂಗತಿ ಹೊರಬಿದ್ದಿದ್ದು, ಏಪ್ರಿಲ್ ತಿಂಗಳಿನಲ್ಲಿ ಏರ್ಟೆಲ್ ಹಾಗೂ ವೊಡಾ ಫೋನ್ 90 ಲಕ್ಷ ಗ್ರಾಹಕರನ್ನು ಕಳೆದುಕೊಂಡಿದ್ದರೆ, ಇದೇ ಅವಧಿಯಲ್ಲಿ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋಗೆ 15.7 ಲಕ್ಷ ಗ್ರಾಹಕರು ಸೇರ್ಪಡೆಗೊಂಡಿದ್ದಾರೆ.