alex Certify ಕೊರೊನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನು ವ್ಯಾಪಿಸಿದೆ. ದಿನೇ ದಿನೇ ಈ ಸೋಂಕು ವ್ಯಾಪಕವಾಗುತ್ತಿದ್ದು, ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಬಹುತೇಕರನ್ನು ಬಾಧಿಸುತ್ತಿದೆ.

ಇದೀಗ ಈ ಸೋಂಕು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೂ ತಗುಲಿದೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇವರುಗಳು ಪರೀಕ್ಷೆಗೆ ಒಳಗಾದಾಗ ಪಾಸಿಟಿವ್ ಬಂದಿದೆ ಎನ್ನಲಾಗಿದ್ದು, ಹೀಗಾಗಿ ದಕ್ಷಿಣ ದೆಹಲಿಯ ಸಾಕೇತ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...