ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಜಾಗತಿಕ ಮಟ್ಟದಲ್ಲಿ ಅಮೆರಿಕಾ ಮತ್ತು ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತವಿದೆ. ಭಾರತದಲ್ಲಿ ಈವರೆಗೆ 6.97 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, 19 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಸೋಂಕಿತರ ಸಂಖ್ಯೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಅಮೆರಿಕಾದಲ್ಲಿ ಈವರೆಗೆ 29,47,205 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 1,32,367 ಕ್ಕೆ ತಲುಪಿದೆ. ಇನ್ನು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ ಸೋಂಕಿತರ ಸಂಖ್ಯೆ 15,78,376 ತಲುಪಿದ್ದು, ಒಟ್ಟು 64,365 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ ಆತಂಕ ತರಿಸಿದ್ದು, ಇದರ ನಿಯಂತ್ರಣಕ್ಕಾಗಿ ಇದೀಗ ಹಲವು ರಾಜ್ಯ ಸರ್ಕಾರಗಳು ಮತ್ತೆ ಕಠಿಣ ಲಾಕ್ ಡೌನ್ ಜಾರಿಗೊಳಿಸುತ್ತಿದ್ದು, ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.