alex Certify ಕ್ವಾರಂಟೈನ್ ಸೆಂಟರ್ ನಲ್ಲಿ ಇಬ್ಬರು ಗರ್ಭಿಣಿಯರಿಗೆ ಭೂತ ಕಾಟ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ಸೆಂಟರ್ ನಲ್ಲಿ ಇಬ್ಬರು ಗರ್ಭಿಣಿಯರಿಗೆ ಭೂತ ಕಾಟ…!

ಕ್ವಾರಂಟೈನ್ ಸೆಂಟರ್ ನಲ್ಲಿ ಭೂತವಿದೆ ಎಂಬ ಸುದ್ದಿ ಜನರನ್ನು ಭಯಗೊಳಿಸಿದೆ. ಘಟನೆ ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಗರ್ಭಿಣಿಯರ ಮೇಲೆ ಭೂತ ಬಂದಿತ್ತೆಂದು ಜನರು ಮಾತನಾಡಿಕೊಳ್ತಿದ್ದಾರೆ. ಜನರನ್ನು ಮನವೊಲಿಸಲು ಅಧಿಕಾರಿಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

ಇಬ್ಬರು ಗರ್ಭಿಣಿಯರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಹೋದ ಅಧಿಕಾರಿಗಳಿಗೆ ಕ್ವಾರಂಟೈನ್ ನಲ್ಲಿದ್ದವರು ಇದು ಭೂತ ಚೇಷ್ಟೆ ಎಂದಿದ್ದಾರೆ. ಘಟನೆ ನಂತ್ರ ಇಬ್ಬರನ್ನು ಮನೆಗೆ ಕಳುಹಿಸಲಾಗಿದೆ. ಇಬ್ಬರೂ ಆರೋಗ್ಯವಾಗಿದ್ದಾರೆ.

ಕ್ವಾರಂಟೈನ್ ಸೆಂಟರ್ ಗೆ ಕಳುಹಿಸಲು ಕುಟುಂಬಸ್ಥರು ವಿರೋಧಿಸಿದ್ದರಂತೆ. ಅವ್ರ ಮನವೊಲಿಸಿ ಗರ್ಭಿಣಿಯರನ್ನು ಕ್ವಾರಂಟೈನ್ ಸೆಂಟರ್ ನಲ್ಲಿ ಇಡಲಾಗಿತ್ತಂತೆ. ಆದ್ರೆ ಅಲ್ಲಿ ವಿಚಿತ್ರವಾಗಿ ವರ್ತಿಸಿದ ಕಾರಣ ಅವ್ರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮನೆಗೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...