ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ಧತಿಗೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ದೇಶದಾದ್ಯಂತ ಇಂದು ರೈಲು ತಡೆಗೆ ಕರೆ ನೀಡಿರುವ ಕಾರಣ ರೈಲು ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ರೈಲು ತಡೆ ಚಳವಳಿ ನಡೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ರೈಲ್ವೆ ಸುರಕ್ಷತಾ ವಿಶೇಷ ಪಡೆಯು ಬಿಗಿಭದ್ರತೆ ಕೈಗೊಂಡಿದೆ.
ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ರೈಲು ತಡೆ ಚಳವಳಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.