ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಣ ದಿನೇ ದಿನೇ ರಂಗೇರುತ್ತಿದ್ದು, ಕೆಲವು ಕ್ಷೇತ್ರಗಳಲ್ಲಿ ಈಗಾಗಲೇ ಮೊದಲ ಹಂತದ ಮತದಾನ ಪೂರ್ಣಗೊಂಡಿದೆ. ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದ್ದು, ಇದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣಕ್ಕಿಳಿದಿರುವ ನಂದಿಗ್ರಾಮ ಕ್ಷೇತ್ರವು ಸಹ ಸೇರಿದೆ.
ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಅವರ ಒಂದು ಕಾಲದ ಆಪ್ತ ಸುವೇಂದು ಅಧಿಕಾರಿ ಎದುರಾಳಿಯಾಗಿದ್ದು, ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನಂದಿಗ್ರಾಮ ಪ್ರತಿಷ್ಠೆಯ ಕಣವಾಗಿದ್ದು, ಹೀಗಾಗಿ ಟಿಎಂಸಿ ಹಾಗೂ ಬಿಜೆಪಿ ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿವೆ.
ಡಿ.ಕೆ. ಶಿವಕುಮಾರ್ ಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಜೈನಮುನಿಗಳು
ನಾಮಪತ್ರ ಸಲ್ಲಿಸುವ ವೇಳೆ ನೂಕಾಟದಲ್ಲಿ ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಇದೀಗ ಬ್ಯಾಂಡೇಜ್ ಕಟ್ಟಿಕೊಂಡು ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡೇ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಸೋಮವಾರದಂದು ನಂದಿಗ್ರಾಮದಲ್ಲಿ ‘ದೀದಿ’ ಸುಮಾರು 8 ಕಿಮೀ ರೋಡ್ ಶೋ ನಡೆಸಿ ಮತ ಯಾಚಿಸಿದರು.