alex Certify ಗುಡ್ ನ್ಯೂಸ್: ದೇಶದಲ್ಲಿ ಇಳಿಕೆಯಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 67 ಸಾವಿರಕ್ಕೂ ಹೆಚ್ಚು ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ದೇಶದಲ್ಲಿ ಇಳಿಕೆಯಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 67 ಸಾವಿರಕ್ಕೂ ಹೆಚ್ಚು ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 53,370 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 650 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,17,956ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇನ್ನೂ 6,80,680 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 70,16,046 ಸೋಂಕಿತರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 67,549 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆಯೊಂದೇ ದಿನ 12,69,479 ಕೊವಿಡ್ ಸ್ಯಾಂಫಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 10,13,82,564 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...