alex Certify ಗುಡ್ ನ್ಯೂಸ್: ದೇಶದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ದೇಶದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ. 66,63,608 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,722 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 75,50,273ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 579 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,14,610ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 7,72,055 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 66,63,608 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 8,59,786 ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 9,50,83,976 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಐ ಸಿ ಎಂ ಆರ್ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...