alex Certify ಗುಡ್ ನ್ಯೂಸ್: ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,129 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 578 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,18,534ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಈವರೆಗೆ 70,78,123 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 62,077 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆಯೊಂದೇ ದಿನ 11,40,905 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 10,25,23,469 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...