ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ರಾಜ್ಯದಲ್ಲೂ ಕೂಡ ಇಳಿಕೆಯಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇದರ ತಡೆಗೆ ಹಲವು ನಿರ್ಬಂಧಗಳನ್ನು ಹೇರಲು ಮುಂದಾಗಿದೆ.
ಇದರ ಜೊತೆಗೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕಿತರಿಗೆ ಸಮರ್ಪಕ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದ ವೈದ್ಯರು ಮತ್ತು ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ಆದೇಶಿಸಲಾಗಿದೆ.
ರೈತ ಸಮುದಾಯಕ್ಕೆ ಮತ್ತೊಂದು ಬಿಗ್ ಶಾಕ್: ರಸಗೊಬ್ಬರ ದರ ಶೇ. 10 ರಿಂದ 30 ರಷ್ಟು ಏರಿಕೆ
ಕಳೆದ ವರ್ಷದ ಆರಂಭದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ವೇಳೆ ಪರಿಸ್ಥಿತಿಯನ್ನು ನಿಭಾಯಿಸಲು 18 ಜಿಲ್ಲೆಗಳಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಶಾಲೆ ತಂತ್ರಜ್ಞರು, ಗ್ರೂಪ್ ಡಿ ನೌಕರರು ಸೇರಿದಂತೆ ಒಟ್ಟು 810 ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ಗರಿಷ್ಠ ಆರು ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದ್ದು, ಈಗ ಇವರುಗಳ ಸೇವೆಯನ್ನು ಮುಂದುವರಿಸಲು ಅನುಮತಿ ನೀಡಲಾಗಿದೆ.