alex Certify ‘ಗೃಹಿಣಿ’ಯರ ಸ್ಥಾನಮಾನ ಕುರಿತಂತೆ ಹೈಕೋರ್ಟ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಿಣಿ’ಯರ ಸ್ಥಾನಮಾನ ಕುರಿತಂತೆ ಹೈಕೋರ್ಟ್ ಮಹತ್ವದ ಹೇಳಿಕೆ

ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡುವ ವೇಳೆ ವ್ಯಕ್ತಿ ಹೊಂದಿರುವ ಉದ್ಯೋಗ, ಅವರುಗಳ ಗಳಿಕೆ ಮೊದಲಾದ ಅಂಶಗಳನ್ನು ಪರಿಗಣಿಸಲಾಗುತ್ತದೆ. ಇದರ ಮಧ್ಯೆ ಮನೆಯಲ್ಲಿ ಕಾರ್ಯ ನಿರ್ವಹಿಸುವ ಗೃಹಿಣಿಯರ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಮದ್ರಾಸ್ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.

ಹೌದು, ಅಪಘಾತವೊಂದರಲ್ಲಿ ಶೇಕಡ 60ರಷ್ಟು ಅಂಗವೈಕಲ್ಯಕ್ಕೆ ತುತ್ತಾಗಿದ್ದ ಮಹಿಳೆಯೊಬ್ಬರು ಹೆಚ್ಚಿನ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ಸಮಯದ ಮಿತಿ ಇಲ್ಲದೆ ಕೆಲಸ ಮಾಡುವ ಗೃಹಿಣಿಯರ ಸ್ಥಾನ ದೊಡ್ಡದು ಎಂದು ಹೇಳಿರುವ ಮದ್ರಾಸ್ ಹೈಕೋರ್ಟ್, ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಹೆಚ್ಚಿನ ಪರಿಹಾರ ಒದಗಿಸಲು ಆದೇಶಿಸಿದೆ.

ಮಹಿಳೆಯರು ಯಾವುದೇ ಸಮಯದ ಮಿತಿ ಇಲ್ಲದೆ ಮನೆಯಲ್ಲಿ ತಮ್ಮ ಕಾರ್ಯ ನಿರ್ವಹಿಸುತ್ತಾರೆ. ಇದನ್ನು ಸಾಮಾನ್ಯ ಉದ್ಯೋಗಿಯಿಂದ ನಿರೀಕ್ಷಿಸಲಾಗದು ಎಂದು ಹೇಳಿರುವ ನ್ಯಾಯಪೀಠ, ಗೃಹಿಣಿಯಾಗಿರುವ ಅರ್ಜಿದಾರ ಮಹಿಳೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಪರಿಹಾರ ನೀಡಲು ಸೂಚಿಸುತ್ತದೆ ಎಂದು ನ್ಯಾಯಪೀಠ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...