
ಗ್ರಾಮೀಣ ಪ್ರದೇಶದ ಜನತೆಗೂ ಸಮರ್ಪಕ ಆರೋಗ್ಯ ಸೇವೆ ಸಿಗಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ತಿಂಗಳು ಸೇವೆ ಸಲ್ಲಿಸಲು ನಿಯಮ ಜಾರಿಗೆ ತರಲಾಗುತ್ತಿದೆ.
ಹೀಗಾಗಿ ಎಂಡಿ ಹಾಗೂ ಎಂಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಮೂರು ತಿಂಗಳು ಸೇವೆ ಸಲ್ಲಿಸಬೇಕಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಲಿದೆ. 2020-21 ರ ಶೈಕ್ಷಣಿಕ ವರ್ಷದಿಂದ ನೂತನ ನಿಯಮ ಜಾರಿಗೆ ಬರಲಿದೆ.
ಈಗಲೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವೈದ್ಯ ಸೇವೆ ಸಿಗುವುದು ಮರೀಚಿಕೆಯಾಗಿದ್ದು, ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ನೂತನ ನಿಯಮದಿಂದಾಗಿ ಸ್ನಾತಕೋತ್ತರ ಶಿಕ್ಷಣದ ಅಂತಿಮ ಪರೀಕ್ಷೆಯನ್ನು ತೆಗೆದುಕೊಳ್ಳಲು ವೈದ್ಯ ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಲಿದೆ.