ಲಕ್ನೋ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಪ್ರಕರಣ ನಡೆದಿದೆ. ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬಳಿಕ ಮಹಿಳೆಯನ್ನು ರಸ್ತೆಯಲ್ಲಿ ಬಿಸಾಕಿ ಹೋಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.
ತಂಪು ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಮಹಿಳೆಗೆ ಕುಡಿಸಿ ಚಲಿಸುತ್ತಿದ್ದ ಬಸ್ ನಲ್ಲಿಯೇ ಅತ್ಯಾಚಾರ ನಡೆಸಿ ಮಹಿಳೆಯನ್ನು ಮೀರತ್ ನ ನಡುರಸ್ತೆಗೆ ಎಸೆದು ಹೋಗಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಹಲವರು ಈ ಕೃತ್ಯ ಎಸಗಿರುವ ಶಂಕೆಯಿದೆ.
ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಅರೆಪ್ರಜ್ಞೆ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾಳೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಧ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.