
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ತಮ್ಮ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸಲುವಾಗಿ ವಿದೇಶಕ್ಕೆ ತೆರಳಿದ್ದು, ಅವರಿಗೆ ಪುತ್ರ ರಾಹುಲ್ ಗಾಂಧಿ ಸಾಥ್ ನೀಡಿದ್ದಾರೆ.
ಹೀಗಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೋಮವಾರದಿಂದ ಆರಂಭವಾಗುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಭಾಗವಹಿಸುವುದು ಅನುಮಾನವಾಗಿದೆ.
ಕೆಲ ದಿನಗಳ ಬಳಿಕ ರಾಹುಲ್ ಗಾಂಧಿ ಭಾರತಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಸೋನಿಯಾ ಪುತ್ರಿ ಪ್ರಿಯಾಂಕಾ ತಾಯಿಯೊಂದಿಗೆ ಇರಲಿದ್ದಾರೆ ಎನ್ನಲಾಗಿದೆ.