ಉತ್ತರ ಪ್ರದೇಶದ ಲಕ್ನೋದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಾಬಾನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕಿತ್ಸೆ ನೀಡುವ ಹೆಸರಿನಲ್ಲಿ ಬಾಬಾ ಲೈಂಗಿಕ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಈ ವಿಷ್ಯ ಸ್ಥಳೀಯರಿಗೆ ತಿಳಿಯುತ್ತಿದ್ದಂತೆ ಆಶ್ರಮದ ಮೇಲೆ ದಾಳಿ ನಡೆಸಿದ ಸ್ಥಳೀಯರು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಸ್ಥಳದಲ್ಲಿದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ ಜೈಲಿಗಟ್ಟಿದ್ದಾರೆ. ಮಹಿಳೆಯರ ಬಿಳಿ ಕಲೆ ಹಾಗೂ ಮಕ್ಕಳಾಗದಿರುವ ಸಮಸ್ಯೆಗೆ ಚಿಕಿತ್ಸೆ ನೀಡುವುದಾಗಿ ಬಾಬಾ ಹೇಳಿದ್ದ. ಅನೇಕ ಬಾರಿ ಮಹಿಳೆಯರು ಹಾಗೂ ಪುರುಷರು ಅಲ್ಲಿ ಹೋಗುವುದನ್ನು ಗ್ರಾಮಸ್ಥರು ನೋಡಿದ್ದರು.
ಸಮಯ ನೋಡಿ ಗ್ರಾಮಸ್ಥರು ದಾಳಿ ನಡೆಸಿದ್ದಾರೆ. ಇದ್ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಬಾನನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.