ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯುಕ್ತ ಹುದ್ದೆ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಚುನಾವಣಾ ಆಯುಕ್ತರನ್ನಾಗಿ ಸರ್ಕಾರಿ ಅಧಿಕಾರಿಗಳನ್ನು ನೇಮಿಸುವಂತಿಲ್ಲ ಎಂದು ಆದೇಶ ನೀಡಿದೆ.
ಗೋವಾದ ಕಾನೂನು ಕಾರ್ಯದರ್ಶಿಗೆ ರಾಜ್ಯ ಚುನಾವಣಾ ಆಯುಕ್ತರ ಜವಾಬ್ದಾರಿ ನೀಡಿದ ಪ್ರಕರಣ ಕುರಿತಂತೆ ಶುಕ್ರವಾರದಂದು ವಿಚಾರಣೆ ನಡೆಸಿದ ವೇಳೆ ಸುಪ್ರೀಂ ಕೋರ್ಟ್ ನಿಂದ ಈ ಮಹತ್ವದ ಆದೇಶ ಹೊರಬಿದ್ದಿದೆ.
ಇಲ್ಲಿದೆ ‘ದ್ವಿತೀಯ ಪಿಯುಸಿ’ ಪರೀಕ್ಷೆಯ ಅಂತಿಮ ವೇಳಾಪಟ್ಟಿ
ರಾಜ್ಯ ಚುನಾವಣಾ ಆಯುಕ್ತರು ಸ್ವತಂತ್ರ ವ್ಯಕ್ತಿಯಾಗಿರಬೇಕು ಎಂದು ಹೇಳಿರುವ ನ್ಯಾಯಾಲಯ, ಒಂದೊಮ್ಮೆ ಸರ್ಕಾರಿ ಹುದ್ದೆಯಲ್ಲಿರುವ ವ್ಯಕ್ತಿ ಆಯುಕ್ತರಾಗಿ ನೇಮಕಗೊಂಡರೆ ಅಧಿಕಾರ ವಹಿಸಿಕೊಳ್ಳುವ ಮುನ್ನ ಅವರು ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.