alex Certify ಜೂನ್ ತಿಂಗಳಲ್ಲಿ ಭಾರತಕ್ಕೆ ಕಾದಿದ್ಯಾ ಕಂಟಕ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ ತಿಂಗಳಲ್ಲಿ ಭಾರತಕ್ಕೆ ಕಾದಿದ್ಯಾ ಕಂಟಕ…?

ಚೀನಾದಿಂದ ಬಂದ ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಮಂಡಿಯೂರುವಂತೆ ಮಾಡಿದೆ. ಕಾಣದ ವೈರಸ್‌ಗೆ ಜನ ಸಮುದಾಯ ನಲುಗಿ ಹೋಗಿದೆ. ದೇಶದ ಆರ್ಥಿಕತೆಗೆ ಹೊಡೆತ ಬಿದ್ದಿದೆ.

ಲಾಕ್‌ಡೌನ್‌ನಿಂದಾಗಿ ಅತ್ತ ಜನ ಪರದಾಡಿದ್ರೆ, ಇತ್ತ ದೇಶದ ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದೆ. ಇನ್ನು ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಕಳೆದ ಕೆಲವು ವಾರಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಪ್ರತಿ ನಿತ್ಯ ದೇಶದಲ್ಲಿ ಐದರಿಂದ ಆರು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಇದು ಹೀಗೆ ಮುಂದುವರೆದರೆ ಹೇಗೆ ಎಂಬುದು ಮುಂದಿನ ಪ್ರಶ್ನೆಯಾಗಿದೆ.

ಆದರೆ ಇದರ ಬೆನ್ನಲ್ಲೇ ಇದೀಗ ತಜ್ಞರು ಹೇಳುವ ಪ್ರಕಾರ, ಭಾರತದಲ್ಲಿ ಜೂನ್ ತಿಂಗಳ ವೇಳೆಗೆ ಈಗಿರುವ ಪ್ರಕರಣಗಳು ದುಪ್ಪಟ್ಟಾಗುತ್ತವೆ ಎಂದು ಹೇಳುತ್ತಿದ್ದಾರೆ.

ಜೂನ್ ತಿಂಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುವ ಹಾಗೂ ಜೂನ್ ತಿಂಗಳು ಭಯಾನಕವಾಗಿರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಾಗಾಗಿ ಜನ ಇವಾಗಲಾದರೂ ಎಚ್ಚೆತ್ತುಕೊಂಡರೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್‌ಡೌನ್ ಸಡಿಲಿಕೆ ಮಾಡಿದ್ದಾರೆ ಎಂದು ಬೇಕಾದ ಹಾಗೆ ಓಡಾಡುತ್ತಿದ್ದರೆ ಸೋಂಕು ಕೂಡ ಅದೇ ವೇಗದಲ್ಲಿ ಹರಡೋದು ಗ್ಯಾರಂಟಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...