alex Certify ಜೂನ್ 1 ರ ಬಳಿಕವೂ ಚಿತ್ರಮಂದಿರ – ಮಾಲ್ ಗಳ ಬಂದ್ ಮುಂದುವರಿಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 1 ರ ಬಳಿಕವೂ ಚಿತ್ರಮಂದಿರ – ಮಾಲ್ ಗಳ ಬಂದ್ ಮುಂದುವರಿಕೆ…?

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಈಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಲಾಕ್ಡೌನ್ ಮೇ 31ಕ್ಕೆ ಅಂತ್ಯಗೊಳ್ಳಲಿದ್ದು, ಜೂನ್ 1ರಿಂದ ಮತ್ತೆ ಹದಿನೈದು ದಿನಗಳ ಕಾಲ ಲಾಕ್ಡೌನ್ ಮುಂದುವರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆದರೆ ಈ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ಗಳನ್ನು ನೀಡಲಾಗುತ್ತದೆ ಎನ್ನಲಾಗಿದ್ದು, ಕೆಲವೊಂದು ಕ್ಷೇತ್ರಗಳ ಮೇಲೆ ಮಾತ್ರ ನಿರ್ಬಂಧ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಜಿಮ್ ಗಳ ಆರಂಭಕ್ಕೆ ಅನುಮತಿ ಸಿಗುವ ಸಾಧ್ಯತೆ ಇದ್ದು, ಆದರೆ ಚಿತ್ರಮಂದಿರ ಹಾಗೂ ಮಾಲ್ ಗಳ ಆರಂಭಕ್ಕೆ ಸದ್ಯಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ ಕೊರೊನಾ ಸೋಂಕು ವ್ಯಾಪಕವಾಗಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೇ 31ರಂದು ರಾಷ್ಟ್ರವನ್ನುದ್ದೇಶಿಸಿ ಮನ್ ಕಿ ಬಾತ್ ನಲ್ಲಿ ಮಾತನಾಡಲಿದ್ದು, ಈ ಸಂದರ್ಭದಲ್ಲಿ 5ನೇ ಹಂತದ ಲಾಕ್ ಡೌನ್ ಜಾರಿ ಕುರಿತು ಪ್ರಕಟಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...