ಕೊರೊನಾ ವೈರಸ್ ಯಾರನ್ನೂ ಬಿಡ್ತಿಲ್ಲ. ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೂಡ ಕೊರೊನಾದಿಂದ ಬಳಲ್ತಿದ್ದಾರೆ. ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ 14 ಅರ್ಚಕರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ.
ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಅವರು ಗುರುವಾರ ದೇವಾಲಯದ ಅರ್ಚಕರು, ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಅವರು ಕೊರೊನಾ ವೈರಸ್ ವಿರುದ್ಧ ಹೋರಾಡುವ ಕ್ರಮಗಳ ಬಗ್ಗೆ ಮಾತನಾಡಿದರು.
ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ಆಂಧ್ರಪ್ರದೇಶದಲ್ಲಿ ಈವರೆಗೆ 38,044 ಕೊರೊನಾ ವೈರಸ್ ಸೋಂಕು ವರದಿಯಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೊರೊನಾ ವೈರಸ್‌ನಿಂದ ಇಲ್ಲಿಯವರೆಗೆ 492 ಜನರು ಸಾವನ್ನಪ್ಪಿದ್ದಾರೆ.