alex Certify ದಶಕದ ಬಳಿಕ ತಮಿಳುನಾಡಿನಲ್ಲಿ ʼಸೂರ್ಯೋದಯʼ; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಎಂ.ಕೆ. ಸ್ಟಾಲಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಶಕದ ಬಳಿಕ ತಮಿಳುನಾಡಿನಲ್ಲಿ ʼಸೂರ್ಯೋದಯʼ; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಎಂ.ಕೆ. ಸ್ಟಾಲಿನ್

ಚೆನ್ನೈ: ದಶಕದ ಬಳಿಕ ತಮಿಳುನಾಡಿನಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೇರಿದ್ದು, ಇಂದು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ನೂತನ ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಪ್ರಮಾಣವಚನ ಭೋದಿಸಿದರು.

ಇನ್ಮುಂದೆ ತಮಿಳುನಾಡಿನಲ್ಲಿ DMK ಆಡಳಿತ – ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾರ್ಲಿನ್, 33 ಸಚಿವರ ಪ್ರಮಾಣವಚನ

ಇದೇ ವೇಳೆ ಸ್ಟಾಲಿನ್ ಅವರೊಂದಿಗೆ 33 ಶಾಸಕರು ಕೂಡ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಎಂಡಿಎಂಕೆ ಸ್ಥಾಪಕ ವೈಕೊ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...