ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ವಿರೋದಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪಂಜಾಬ್, ಹರಿಯಾಣದ ಸಾವಿರಾರು ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ ಈ ರೈತರ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಈ ಪ್ರತಿಭಟನೆ ಸಾಕಷ್ಟು ಜನ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಇದೀಗ ರಾಜ್ಯದ ರೈತರು ಕೂಡ ಪ್ರತಿಭಟನೆಗೆ ಸಾಥ್ ನೀಡುತ್ತಿದ್ದಾರೆ.
ಹೌದು, ದೆಹಲಿ ಚಲೋ ಪ್ರತಿಭಟನೆಗೆ ರಾಜ್ಯದಿಂದ ಶೀಘ್ರವೇ ದೆಹಲಿಗೆ ರೈತರು ತೆರಳಲಿದ್ದಾರೆ. ಸುಮಾರು 100 ವಾಹನದಲ್ಲಿ ರೈತರು ದೆಹಲಿಗೆ ಹೋಗಲಿದ್ದಾರೆ. ಈ ಕುರಿತು ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ವಿರೋಧಿ ಮಸೂದೆ ಹಿಂಪಡೆಯಬೇಕು. ಈ ಸಂಬಂಧ ನಮ್ಮ ರೈತರು ದೆಹಲಿಗೆ ಹೋಗಲಿದ್ದಾರೆ, ಆ ರೈತರಿಗೆ ಸಾಥ್ ನೀಡುತ್ತಾರೆ ಎಂದು ಹೇಳಿದ್ದಾರೆ.
ಹಾಗೆಯೇ ಅಲ್ಲಿನ ಪೊಲೀಸರು ರೈತರ ಜೊತೆ ನಡೆದುಕೊಂಡ ರೀತಿ ಸರಿಯಲ್ಲ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು. ಇನ್ನು ನಾವು ಕೂಡ ಅಧಿವೇಶನದ ಸಮಯದಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಿದ್ದೇವೆ. ಮೋದಿಯವರು ರೈತರ ಪರ ಇಲ್ಲ. ಕಾರ್ಪೊರೇಟ್ ಸಂಸ್ಥೆಗಳ ಪರವಾಗಿಯೇ ಇದ್ದಾರೆ ಅಂತ ಮೋದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.