ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ತತ್ತರಿಸಿಹೋಗಿದೆ. ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಕಾರಣ ದೆಹಲಿ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಮಾತ್ರ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶ ನೀಡಿದ್ದರು.
ಈ ಆದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ತಡೆ ನೀಡಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೂ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಹೀಗಾಗಿ ಕೇಜ್ರಿವಾಲ್ ಮನೆಯಲ್ಲೇ ಐಸೋಲೇಷನ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಅರವಿಂದ ಕೇಜ್ರಿವಾಲ್ ಭಾನುವಾರ ಮಧ್ಯಾಹ್ನದಿಂದ ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದು, ಇಂದು ಅವರಿಗೆ ಕೊರೊನಾ ಪರೀಕ್ಷೆ ನಡೆಯಲಿದೆ. ಈಗ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಲಾಗಿದೆ.