alex Certify ದೇಶದಲ್ಲಿದೆ ಇನ್ನೂ 9,68,377 ಕೋವಿಡ್ ಸಕ್ರಿಯ ಪ್ರಕರಣ; ಒಂದೇ ದಿನದಲ್ಲಿ ಪತ್ತೆಯಾದ ಸೋಂಕಿತರೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿದೆ ಇನ್ನೂ 9,68,377 ಕೋವಿಡ್ ಸಕ್ರಿಯ ಪ್ರಕರಣ; ಒಂದೇ ದಿನದಲ್ಲಿ ಪತ್ತೆಯಾದ ಸೋಂಕಿತರೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 83,347 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 56 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 56,46,011 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,085 ಜನರು ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 90,020ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,68,377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 45,87,614 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...