alex Certify ದೇಶದಲ್ಲಿದೆ 1,73,740 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿದೆ 1,73,740 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,666 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,01,193ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,53,847ಕ್ಕೆ ಏರಿಕೆಯಾಗಿದೆ.

ರೂಪಾಂತರಿ ಕೊರೋನಾ ವೈರಸ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಇನ್ನು ದೇಶದಲ್ಲಿ 1,73,740 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,03,73,606 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,301 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 23,55,979 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...