alex Certify ದೇಶದಲ್ಲಿದೆ 4,16,082 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿದೆ 4,16,082 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,594 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 540 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,39,188ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,16,082 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 90,16,289 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,916 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...