alex Certify ದೇಶದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 83,833 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 83,833 ಮಂದಿಗೆ ಸೋಂಕು

ನವದೆಹಲಿ: ದೇಶಾದ್ಯಂತ ಸೆ.1ರಿಂದ ಅನ್ ಲಾಕ್ 4.0 ಜಾರಿಗೆ ಬಂದಿದ್ದು, ಈ ನಡುವೆ ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 83,833 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 38 ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಯಲ್ಲಿ 83,833 ಕೊವಿಡ್ ಕೇಸ್ ಗಳು ಪತ್ತೆಯಾಗಿದ್ದು, ಇದು ಈವರೆಗೆ ಒಂದೇ ದಿನದಲ್ಲಿ ಪತ್ತೆಯಾದ ಅತಿ ಹೆಚ್ಚು ಕೇಸ್ ಗಳಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 38,53,406ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಕಳೆದ 24 ಗಂಟೆಗಳಲ್ಲಿ 1,043 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 66,333 ಕ್ಕೆ ಏರಿಕೆಯಾಗಿದೆ.

29,019,09 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಇನ್ನೂ ದೇಶದಲ್ಲಿ 8,01,282 ಪ್ರಕರಣಗಳು ಸಕ್ರಿಯವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...