alex Certify ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ: ಒಂದೇ ದಿನದಲ್ಲಿ 96,551 ಸೋಂಕಿತರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ: ಒಂದೇ ದಿನದಲ್ಲಿ 96,551 ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ರಣಕೇಕೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 96,551 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 45 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ 96,551 ಜನರಲ್ಲಿ ಕೊವಿಡ್ ವೈರಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 45,62,415ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,209 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 76,271ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,43,48 ಸಕ್ರಿಯ ಪ್ರಕರಣಗಳಿದ್ದು, 35,42,664 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...