ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24ಗಂಟೆಯಲ್ಲಿ 88,600 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ ಒಂದೇ ದಿನದಲ್ಲಿ ದೇಶದಲ್ಲಿ 1,124 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 94,503ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 9,56,402 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 49,41,628 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 9,87,861 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 7,12,57,836 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.