alex Certify ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಸಾವಿನ ಸಂಖ್ಯೆಯಲ್ಲೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 78,524 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 68,35,656ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 971 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,05,526ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,02,425 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 58,27,705 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 11,94,321 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,34,65,975 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐ ಸಿ ಎಂ ಆರ್ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...