alex Certify ದೇಶದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ; ಸಾವಿನ ಸಂಖ್ಯೆಯಲ್ಲೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಮಹಾಮಾರಿ ಅಬ್ಬರ ಮತ್ತೆ ಮುಂದುವರೆದಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 63 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 86,821 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆಯಾಗಿದೆ.

ಕಳೆದ ಒಂದೇ ದಿನದಲ್ಲಿ ದೇಶದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಿದ್ದು, 24 ಗಂಟೆಯಲ್ಲಿ 1,181 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,40,705 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 52,73,202 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 7,56,19,781 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 14,23,052 ಜನರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...