alex Certify ದೇಶದಲ್ಲಿ 60 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ 60 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 60 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 82,170 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 60,74,703ಕ್ಕೆ ಏರಿಕೆಯಾಗಿದೆ.
ಕಳೆದ ಒಂದೇ ದಿನದಲ್ಲಿ ದೇಶದಲ್ಲಿ 1,039 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 95,542ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,62,640 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 5,01,6521 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 7,09,394 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 7,19,67,230 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...