ಪಾಕಿಸ್ತಾನ, ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಬಂಧಿಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಒಂದು ಖಡಕ್ ಸಂದೇಶಕ್ಕೆ ಬೆಚ್ಚಿಬಿದ್ದು ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿತ್ತೆಂಬ ಸಂಗತಿ ಈಗ ಬೆಳಕಿಗೆ ಬಂದಿದೆ. ವಾಯುಪಡೆಯ ಮಾಜಿ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
2019ರ ಫೆಬ್ರವರಿ 27ರಂದು ಪಾಕಿಸ್ತಾನದ ಯುದ್ಧ ವಿಮಾನಗಳು ಭಾರತದ ವಾಯುಪ್ರದೇಶ ಪ್ರವೇಶಿಸಿದ ವೇಳೆ ಭಾರತೀಯ ವಾಯುಪಡೆ ವಿಮಾನಗಳು ಅವುಗಳನ್ನು ಬೆನ್ನಟ್ಟಿ ಹೊರ ಹಾಕಿದ್ದವು. ಈ ಸಂದರ್ಭದಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿದ್ದ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲಕ್ಕೆ ಅಪ್ಪಳಿಸಿತ್ತು.
ಬಂಗಾಳದಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿಗೆ ‘ಬಿಗ್ ಶಾಕ್’
ಆಗ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನದ ಪಡೆಗಳು ಸಮರ ಕೈದಿಯಾಗಿ ವಶಕ್ಕೆ ಪಡೆದಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ‘ನಮ್ಮ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ದೀಪಾವಳಿ ಪ್ರದರ್ಶನಕ್ಕೆ ಇರಿಸಿಕೊಂಡಿಲ್ಲ. ಅವುಗಳ ಮೂಲಕ ಉತ್ತರ ನೀಡುತ್ತೇವೆ’ ಎಂದು ‘ರಾ’ ಮುಖ್ಯಸ್ಥರ ಮೂಲಕ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದರು. ಇದರಿಂದ ಬೆಚ್ಚಿಬಿದ್ದ ಪಾಕಿಸ್ತಾನ, ತಮ್ಮ ವಶದಲ್ಲಿದ್ದ ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿತ್ತು ಎಂಬ ಸಂಗತಿ ಬಹಿರಂಗವಾಗಿದೆ.