ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಂಕಷ್ಟ ಹೆಚ್ಚಾಗಿದೆ.ಪ್ರಶಾಂತ್ ಭೂಷಣ್ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಆಗಸ್ಟ್ 20ರಂದು ಹೊರಬೀಳಲಿದೆ.
ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಹಿಂದಿನ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಎರಡು ಅವಹೇಳನಕಾರಿ ಟ್ವೀಟ್‌ಗಳನ್ನು ಮಾಡಿದ್ದರು. ಇದ್ರ ವಿಚಾರಣೆ ನಡೆಸಿದ ಕೋರ್ಟ್ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ, ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರ ಪೀಠವು ಭೂಷಣ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದೆ.