ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಹರಸಾಹಸ ನಡೆಸಿದೆ. ಇದಕ್ಕಾಗಿ ದಿನಕ್ಕೊಂದು ಕಾರ್ಯತಂತ್ರ ರೂಪಿಸುತ್ತಿದ್ದು, ಈಗಾಗಲೇ ತೃಣಮೂಲ ಕಾಂಗ್ರೆಸ್ ನ ಹಲವು ಸಚಿವ – ಶಾಸಕರುಗಳನ್ನು ಬಿಜೆಪಿಗೆ ಸೆಳೆಯಲಾಗಿದೆ.
ಇತ್ತೀಚೆಗಷ್ಟೇ ಖ್ಯಾತ ಬಂಗಾಳಿ ನಟ ಯಶ್ ದಾಸ್ ಗುಪ್ತಾ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದು, ಅವರ ಜೊತೆಗೆ ಆರಕ್ಕೂ ಅಧಿಕ ನಟರು ಸಹ ಬಿಜೆಪಿ ಸೇರಿಕೊಂಡಿದ್ದಾರೆ. ಇದೀಗ ಮತ್ತೊಬ್ಬ ಖ್ಯಾತ ನಟನನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕೊಲ್ಕತ್ತಾಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ಟಿಕೆಟ್ ಪಡೆಯದಿದ್ದರೆ ಕಂಡಕ್ಟರ್ ಗೆ ದಂಡವಿಲ್ಲ, ಪ್ರಯಾಣಿಕರಿಂದಲೇ ‘ಫೈನ್’ ವಸೂಲಿ
ಪಶ್ಚಿಮ ಬಂಗಾಳ ಮೂಲದ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮಿಥುನ್ ಚಕ್ರವರ್ತಿ ನಿವಾಸಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಮಿಥುನ್ ಚಕ್ರವರ್ತಿ ಭಾನುವಾರ ಕೊಲ್ಕತ್ತಾದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.