ಕೋಲ್ಕತ್ತಾ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, 15 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಾಳೆಯಿಂದ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿಮಾಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ರಿಂದ 10 ಗಂಟೆಯವರೆ ಸಮಯ ನಿಗದಿ ಮಾಡಿದ್ದು, ಮೆಟ್ರೋ ಸಂಚಾರ, ಸಾರಿಗೆ ಸೇರಿದಂತೆ ಎಲ್ಲವನ್ನೂ ಸಂಪೂರ್ಣ ಬಂದ್ ಮಾಡಲಾಗಿದೆ.
10 ದಿನ ವೆಂಟಿಲೇಟರ್ ನಲ್ಲಿದ್ದು ಕೊರೊನಾ ಗೆದ್ದು ಬಂದ 1 ತಿಂಗಳ ಮಗು
ಲೋಕಲ್ ಟ್ರೇನ್, ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಕೈಗಾರಿಕೆಗಳು, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಪೆಟ್ರೋಲ್ ಬಂಕ್, ಬ್ಯಾಂಕ್ ಕಾರ್ಯನಿರ್ವಹಣೆಗೆ ಕೂಡ ಸಮಯ ನಿಗದಿ ಮಾಡಲಾಗಿದೆ.