ಕೊರೊನಾ ಮಹಾಮಾರಿ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಕೊರೊನಾ ಆರ್ಭಟ ಇನ್ನೂ ಮುಂದುವರೆಯುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ ತಜ್ಞರು. ಈ ಬೆನ್ನಲ್ಲೇ ವಿಪಕ್ಷಗಳು ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಿವೆ. ಇದೀಗ ಶಶಿ ತರೂರ್ ಕೂಡ ಮೋದಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.
ಕೊರೊನಾವನ್ನು ನಿಯಂತ್ರಣ ಮಾಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಕೊರೊನಾ ನಿಯಂತ್ರಿಸುವಲ್ಲಿ ಭಾರತಕ್ಕಿಂತ ಪಾಕಿಸ್ತಾನವೇ ಎಷ್ಟೋ ಉತ್ತಮ. ಕೊರೊನಾ ನಿಯಂತ್ರಣ ಮಾಡುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ ಎನ್ನುವ ಮೂಲಕ ಹೊಸ ವಿವಾದ ಹುಟ್ಟು ಹಾಕಿದ್ದಾರೆ ಕಾಂಗ್ರೆಸ್ ಸಂಸದ ಶಶಿ ತರೂರ್. ಲಾಹೋರ್ ಸಾಹಿತ್ಯ ಉತ್ಸವದಲ್ಲಿ ಮಾತನಾಡಿರುವ ಅವರು, ಕೊರೊನಾ ನಿಯಂತ್ರಣ ಮಾಡದೇ ಹೋದರೆ ಆರ್ಥಿಕತೆಗೆ ಇನ್ನೂ ದೊಡ್ಡ ಪೆಟ್ಟು ಬೀಳುತ್ತದೆ. ಈ ರೋಗವನ್ನು ನಿಯಂತ್ರಣ ಮಾಡುವಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಶಶಿ ತರೂರ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದೆ. ನಮ್ಮ ದೇಶವನ್ನು ಕೀಳಾಗಿ ನೋಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವ ಮೂಲಕ ಅವಮಾನ ಮಾಡುತ್ತಿದ್ದಾರೆ ಎಂಬ ಆಕ್ರೋಶಗಳ ಕೇಳಿ ಬರುತ್ತಿವೆ.