ದೇಶದ ರಾಜಧಾನಿ ದೆಹಲಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಮಗುವನ್ನು ಅಪಹರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಉತ್ತರ ದೆಹಲಿಯ ಕೆಂಪು ಕೋಟೆ ಬಳಿಯ ಉದ್ಯಾನವನದಲ್ಲಿ ಅತ್ಯಾಚಾರ ನಡೆದಿದೆ. ಮಹಿಳೆ ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ನಿರಾಶ್ರಿತರು. ಇಬ್ಬರು ಪರಸ್ಪರ ಪರಿಚಿತರು.ಈ ಘಟನೆ ಶನಿವಾರ ನಡೆದಿದೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅತ್ಯಾಚಾರವೆಸಗಿ ಮಹಿಳೆ ತಲೆಗೆ ಹೊಡೆದಿದ್ದಾನೆ. ತಲೆಯಿಂದ ರಕ್ತ ಸೋರುತ್ತಿರುವುದನ್ನು ನೋಡಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾರೆ.
ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಮಗುವನ್ನು ಆರೋಪಿ ಅಪಹರಿಸಿದ್ದಾನೆ ಎನ್ನಲಾಗಿತ್ತು. ನಂತ್ರ ಪೊಲೀಸರು ಮಗುವನ್ನು ಪತ್ತೆ ಮಾಡಿದ್ದಾರೆ.