ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡುತ್ತದೆ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿತ್ತು. ಆದರೆ ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ನಿರಾಸೆಯ ಸುದ್ದಿಯೊಂದನ್ನು ನೀಡಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ಅವರು, ಇಂಧನದ ಮೇಲಿನ ತೆರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದಾಯದ ಮೂಲವಾಗಿದೆ. ಅಲ್ಲದೆ ಕೊರೊನಾದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಚೇತರಿಕೆಗೆ ಇದು ಸಹಾಯಕವಾಗಲಿದೆ ಎಂದು ಹೇಳುವ ಮೂಲಕ ಪೆಟ್ರೋಲ್ – ಡೀಸೆಲ್ ಮೇಲಿನ ತೆರಿಗೆ ಇಳಿಕೆಯನ್ನು ಪರೋಕ್ಷವಾಗಿ ತಳ್ಳಿ ಹಾಕಿದ್ದಾರೆ.
ಮನೆ ಮಾಲೀಕರಿಗೆ ಕರೆಮಾಡಿ ಕ್ಷಮೆ ಯಾಚಿಸಿದ ಸಿಡಿ ಪ್ರಕರಣದ ಯುವತಿ
ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲೂ ಪರಿಣಾಮ ಬೀರಿದೆ. ಆದರೆ ಪೆಟ್ರೋಲ್ – ಡೀಸೆಲ್ ದರ ಏರಿಕೆ ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲ್ಲಿ ಇದು ಇಳಿಕೆಯಾಗಲಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.