ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ವಾಪಸ್ ಆಗುತ್ತಿದ್ದಾಗ ಉಗ್ರರು ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಮೃತ ಇನ್ ಪೆಕ್ಟರ್ ಪುಲ್ವಾಮಾ ಜಿಲ್ಲೆಯ ಲೆಥ್ ಪೊರಾದ ಪೊಲೀಸ್ ತರಬೇತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅಶ್ರಫ್ ಅವರನ್ನು ಬಿಜ್ ಬೆಹರಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅಶ್ರಫ್ ಮೃತಪಟ್ಟಿದ್ದಾರೆ.