ಕೊರೊನಾ ನಿಯಂತ್ರಣದಲ್ಲಿ ಯಶಸ್ಸು ಸಾಧಿಸಿದ್ದ ಭಾರತ ಲಸಿಕೆ ವಿಚಾರದಲ್ಲೂ ಮುಂಚೂಣಿಯಲ್ಲಿದೆ. ಸ್ವಾವಲಂಬಿ ಭಾರತದ ಕಲ್ಪನೆಯೊಂದಿಗೆ ದೇಶಿಯವಾಗಿ 2 ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ದೇಶವಾಸಿಗಳಿಗೆ ಲಸಿಕೆ ನೀಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ.
ಮೂರನೇ ಹಂತದ ಲಸಿಕೆ ನೀಡುವ ಅಭಿಯಾನ ಈಗ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಆದ್ಯತೆ ನೀಡಲಾಗುತ್ತಿದೆ. ಏಪ್ರಿಲ್ ತಿಂಗಳಿನಿಂದ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ತಾಜ್ ಮಹಲ್ ಗೆ ರಾಮ್ ಮಹಲ್ ಎಂದು ಮರುನಾಮಕರಣ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ
ಇದರ ಮಧ್ಯೆ ಭಾರತ, 65ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಕೊರೊನಾ ನಿರೋಧಕ ಲಸಿಕೆಯನ್ನು ವಿತರಿಸಿದ್ದು ಈ ಪೈಕಿ ಕೆರಿಬಿಯನ್ ರಾಷ್ಟ್ರಗಳೂ ಸೇರಿವೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ದಿಗ್ಗಜರಾದ ಸರ್ ವಿವಿಯನ್ ರಿಚರ್ಡ್ಸ್, ರಿಚಿ ರಿಚರ್ಡ್ಸನ್ ಹಾಗೂ ಜಿಮ್ಮಿ ಅಡಮ್ಸ್, ಪ್ರಧಾನಿ ಮೋದಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಿಚರ್ಡ್ಸ್ ಅವರು ನೀಡಿರುವ ವಿಡಿಯೋ ಸಂದೇಶವನ್ನು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಟ್ವಿಟರ್ ಖಾತೆಯಿಂದ ಅಪ್ಲೋಡ್ ಮಾಡಲಾಗಿದೆ.