ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗಡಿಭಾಗಕ್ಕೆ ಭೇಟಿ ನೀಡಿದ್ದು, ಚೀನಾ ಸಂಘರ್ಷದ ಕುರಿತು ಸೇನಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದರು. ಬಳಿಕ ಲೇಹ್ ನಲ್ಲಿನ ಆಸ್ಪತ್ರೆಗೆ ಭೇಟಿ ನೀಡಿ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆ ವೇಳೆ ಗಾಯಗೊಂಡಿದ್ದ ಸೈನಿಕರ ಯೋಗಕ್ಷೇಮ ವಿಚಾರಿಸಿದ್ದರು.
ನರೇಂದ್ರ ಮೋದಿ ಅವರ ಆಸ್ಪತ್ರೆ ಭೇಟಿ ಫೋಟೋ ಮಾಧ್ಯಮಗಳಲ್ಲಿ ಪ್ರಕಟಗೊಂಡ ಬಳಿಕ ಇದು ಚರ್ಚೆಗೆ ಕಾರಣವಾಗಿತ್ತು. ಅದರಲ್ಲೂ ಪ್ರತಿಪಕ್ಷ ಕಾಂಗ್ರೆಸ್ ನಾಯಕರು, ಪ್ರಧಾನಿ ನಾಟಕ ಮಾಡುತ್ತಿದ್ದಾರೆ. ಅವರು ಭೇಟಿ ನೀಡಿರುವುದು ಆಸ್ಪತ್ರೆಗಲ್ಲ. ಸಮ್ಮೇಳನ ಸಭಾಂಗಣಕ್ಕೆ ಎಂದು ಹೇಳಿದ್ದರು.
ಇದೀಗ ಈ ಕುರಿತು ಸೇನಾ ವಕ್ತಾರರು ಸ್ಪಷ್ಟನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿದ್ದು ನಿಜ. ಅಲ್ಲಿ ಸೈನಿಕರ ಯೋಗಕ್ಷೇಮ ವಿಚಾರಿಸಿದ್ದಾರೆ ಎಂದು ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೇನಾ ಆಸ್ಪತ್ರೆಯ ಕೆಲವು ವಾರ್ಡ ಗಳನ್ನು ಇದರ ಚಿಕಿತ್ಸೆಗೆ ಮೀಸಲಿಡಲಾಗಿದ್ದು, ಹೀಗಾಗಿ ತರಬೇತಿಗಾಗಿ ಬಳಸುತ್ತಿದ್ದ ಸಭಾಂಗಣವನ್ನು 100 ಹಾಸಿಗೆ ಸಾಮರ್ಥ್ಯದ ಜನರಲ್ ಆಸ್ಪತ್ರೆ ಆಗಿ ಪರಿವರ್ತಿಸಲಾಗಿದೆ ಎಂದು ತಿಳಿಸಲಾಗಿದೆ.