ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ವಿಚಾರವಾಗಿ ನಿಯತಕಾಲಿಕ ಒಂದಕ್ಕೆ ಪ್ರಶಾಂತ್ ಭೂಷಣ್ ನೀಡಿದ್ದ ಸಂದರ್ಶನ ದೊಡ್ಡ ಮಟ್ಟದಲ್ಲಿ ಚರ್ಚೆಯಾಗೋದರ ಜೊತೆಗೆ ಅನೇಕರ ಕೆಂಗಣ್ಣಿಗೆ ಗುರಿಯಾಗಿತ್ತು. ಅಷ್ಟೆ ಅಲ್ಲ ಪ್ರಶಾಂತ್ ಭೂಷಣ್ ಅನೇಕ ನ್ಯಾಯಾಧೀಶರ ಮೇಲೆ ಆರೋಪ ಕೂಡ ಮಾಡಿದ್ದರು.
ಅವರ ನ್ಯಾಯಾಂಗ ನಿಂದನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದೆ. ಇವರ ಪ್ರಕರಣವನ್ನು ಸೂಕ್ತ ನ್ಯಾಯಪೀಠದ ಮುಂದಿಡಲು ಕೋರ್ಟ್ ಆದೇಶ ನೀಡಿದೆ. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂತಹ ಆದೇಶವನ್ನು ನೀಡಿದೆ.
ಈ ವಿಚಾರದಲ್ಲಿ ಕೂಲಂಕುಷವಾಗಿ ವಿಚಾರಣೆ ಮಾಡುವ ಅವಶ್ಯಕತೆ ಇರುವುದರಿಂದ ಸೂಕ್ತ ನ್ಯಾಯ ಪೀಠಕ್ಕೆ ವರ್ಗಾಯಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.