alex Certify ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಸುಪ್ರೀಂ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಶಾಂತ್ ಭೂಷಣ್ ಪ್ರಕರಣದಲ್ಲಿ ಸುಪ್ರೀಂ ಹೇಳಿದ್ದೇನು ಗೊತ್ತಾ…?

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ವಿಚಾರವಾಗಿ ನಿಯತಕಾಲಿಕ ಒಂದಕ್ಕೆ ಪ್ರಶಾಂತ್ ಭೂಷಣ್ ನೀಡಿದ್ದ ಸಂದರ್ಶನ ದೊಡ್ಡ ಮಟ್ಟದಲ್ಲಿ ಚರ್ಚೆಯಾಗೋದರ ಜೊತೆಗೆ ಅನೇಕರ ಕೆಂಗಣ್ಣಿಗೆ ಗುರಿಯಾಗಿತ್ತು. ಅಷ್ಟೆ ಅಲ್ಲ ಪ್ರಶಾಂತ್ ಭೂಷಣ್ ಅನೇಕ ನ್ಯಾಯಾಧೀಶರ ಮೇಲೆ ಆರೋಪ ಕೂಡ ಮಾಡಿದ್ದರು.

ಅವರ ನ್ಯಾಯಾಂಗ ನಿಂದನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದೆ. ಇವರ ಪ್ರಕರಣವನ್ನು ಸೂಕ್ತ ನ್ಯಾಯಪೀಠದ ಮುಂದಿಡಲು ಕೋರ್ಟ್ ಆದೇಶ ನೀಡಿದೆ. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂತಹ ಆದೇಶವನ್ನು ನೀಡಿದೆ.

ಈ ವಿಚಾರದಲ್ಲಿ ಕೂಲಂಕುಷವಾಗಿ ವಿಚಾರಣೆ ಮಾಡುವ ಅವಶ್ಯಕತೆ ಇರುವುದರಿಂದ ಸೂಕ್ತ ನ್ಯಾಯ ಪೀಠಕ್ಕೆ ವರ್ಗಾಯಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...