ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಮತದಾನ ಪೂರ್ಣಗೊಂಡಿದ್ದು, ಎಲ್ಲ ರಾಜಕೀಯ ಪಕ್ಷಗಳು ಫಲಿತಾಂಶದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದಾರೆ. ಚುನಾವಣೆ ಮುಗಿದ ರಾಜ್ಯಗಳ ಪೈಕಿ ಅಸ್ಸಾಂ ಕೂಡ ಒಂದು.
ಅಸ್ಸಾಂ ವಿಧಾನಸಭೆಯ 126 ಕ್ಷೇತ್ರಗಳಿಗೆ ಒಟ್ಟು ಮೂರು ಹಂತಗಳಲ್ಲಿ ಚುನಾವಣೆ ನಡೆದಿದ್ದು ಏಪ್ರಿಲ್ 6ರಂದು ಮತದಾನ ಮುಕ್ತಾಯಗೊಂಡಿದೆ. ಮತ ಎಣಿಕೆ ಕಾರ್ಯ ಮೇ 2ರಂದು ನಡೆಯಲಿದ್ದು, ಆದರೆ ಅದಕ್ಕೂ ಮುನ್ನವೇ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ.
ಟೆಲಿ ಮಾರ್ಕೆಟಿಂಗ್ ಕರೆಗಳಿಂದ ಬೇಸತ್ತಿದ್ದೀರಾ..? ಇಲ್ಲಿದೆ ಅದಕ್ಕೆ ಪರಿಹಾರ
ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳುತ್ತಿದ್ದರೂ ಸಹ ಅತಿ ವಿಶ್ವಾಸದಲ್ಲಿರುವ ಕಾಂಗ್ರೆಸ್ ಮತ್ತು ಎಐಡಿಯುಎಫ್, ಫಲಿತಾಂಶದ ಬಳಿಕ ಬಿಜೆಪಿ ಎಲ್ಲಿ ಆಪರೇಷನ್ ಕಮಲ ಆರಂಭಿಸುತ್ತದೋ ಎಂಬ ಭೀತಿಯಲ್ಲಿವೆ.
ಈ ಹಿನ್ನೆಲೆಯಲ್ಲಿ ಫಲಿತಾಂಶಕ್ಕೂ ಮುನ್ನವೇ ರೆಸಾರ್ಟ್ ಪಾಲಿಟಿಕ್ಸ್ ಆರಂಭವಾಗಿದ್ದು, ತಮ್ಮ ಪಕ್ಷದ 20ಕ್ಕೂ ಅಧಿಕ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜಸ್ಥಾನದ ಜೈಪುರಕ್ಕೆ ಕಳುಹಿಸಿಕೊಡಲಾಗಿದೆ. ಫಲಿತಾಂಶ ಪ್ರಕಟವಾಗುವವರೆಗೂ ಅಭ್ಯರ್ಥಿಗಳು ಅಲ್ಲಿಯೇ ಇರಲಿದ್ದಾರೆನ್ನಲಾಗಿದೆ.