ಅನಾರೋಗ್ಯಕ್ಕೊಳಗಾದ ಸಂದರ್ಭದಲ್ಲಿ ಬಡಜನತೆಗೆ ಚಿಕಿತ್ಸೆ ಪಡೆದುಕೊಳ್ಳುವುದು ಬಲು ದುಬಾರಿಯಾದ ಸಂಗತಿ. ಅದರಲ್ಲೂ ಮಾತ್ರೆ – ಔಷಧಿಗಳಿಗೆ ಹಣ ವೆಚ್ಚ ಮಾಡುವುದು ಕಷ್ಟಕರವಾಗಿ ಪರಿಣಮಿಸುತ್ತದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನೌಷಧಿ ಮಳಿಗೆಗಳನ್ನು ತೆರೆದಿದ್ದು, ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳು ಇಲ್ಲಿ ದೊರೆಯುತ್ತವೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿಯನ್ನು ನೀಡಿದೆ.
ದೇಶದ ಪ್ರತಿ ಜಿಲ್ಲೆಯಲ್ಲೂ ಜನೌಷಧಿ ಮಳಿಗೆಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆದಿದ್ದು, 2025ರ ಮಾರ್ಚ್ ವೇಳೆಗೆ ಜನೌಷಧಿ ಮಳಿಗೆಗಳ ಸಂಖ್ಯೆ 6,606 ರಿಂದ 10,500 ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.