alex Certify ಬಾಲಕಿ ಮೇಲೆ ಅತ್ಯಾಚಾರವೆಸಗಿದವನನ್ನು ಹೊಡೆದು ಕೊಂದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿದವನನ್ನು ಹೊಡೆದು ಕೊಂದ್ರು

8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಘಟನೆ ಪಾಟ್ನಾದ ಹಳ್ಳಿಯಲ್ಲಿ ನಡೆದಿದೆ. ಯುವಕ, ಬಾಲಕಿಯನ್ನು ಒತ್ತಾಯ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ.

ಈ ವಿಷ್ಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಗ್ರಾಮಸ್ಥರು ಕೋಲಿನಿಂದ ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

ಹುಡುಗಿ ಹಾಗೂ ಆರೋಪಿ ಮನೆ ಅಕ್ಕಪಕ್ಕದಲ್ಲಿತ್ತು. ಆತ ಒಂಟಿಯಾಗಿ ವಾಸವಾಗಿದ್ದ. ಕಸ ಸಂಗ್ರಹಿಸುವ ಕೆಲಸ ಮಾಡ್ತಿದ್ದನಂತೆ. ಕೃತ್ಯ ಗೊತ್ತಾಗ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...